Sunday, 15th December 2024

ಎನ್ ಸಿ ಪಿ ಪಕ್ಷಕ್ಕೆ ಆರ್ ಶಂಕರ್ ಅಧಿಕೃತವಾಗಿ ಸೇರ್ಪಡೆ

ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡ ಮಾಜಿ ಪರಿಷತ್ ಸದಸ್ಯ ಆರ್ ಶಂಕರ್ ಎನ್ ಸಿ ಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಎನ್ ಸಿ ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ರಾಣೆಬೆನ್ನೂರು ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

ರಾಣೆಬೆನ್ನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರಿಗೆ, ಈ ಬಾರಿಯ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಈ ಹಿನ್ನಲೆಯಲ್ಲಿಯೇ ಬೇಸರ ಗೊಂಡಿದ್ದ ಅವರು, ಕೆಲ ದಿನಗಳ ಹಿಂದೆ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿ ಹೊರನಡೆದಿದ್ದರು.

ಇಂದು ಮಾಜಿ ಸಚಿವ ಆರ್ ಶಂಕರ್ ಅವರು, ಎನ್ ಸಿ ಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದು, ಪಕ್ಷದಿಂದ ಟಿಕೆಟ್ ಪಡೆದು ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸೋದು ಫಿಕ್ಸ್ ಎನ್ನಲಾಗುತ್ತಿದೆ.