ಬೆಂಗಳೂರು: ವಿಧಾಸನಭೆ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ಶಾಸಕ ರುದ್ರಪ್ಪ ಲಮಾಣಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿರುವ ಶಾಸಕ ರುದ್ರಪ್ಪ ಲಮಾಣಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಮುಖ್ಯಮಂತ್ರಿಗಳು ಶುಭ ಕೋರಿದ್ದಾರೆ.
ಈಗಾಗಲೇ ವಿಧಾನಸಭೆಯ ಸ್ಪೀಕರ್ ಆಗಿ ಯು.ಟಿ ಖಾದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಡೆಪ್ಯೂಟಿ ಸ್ಪೀಕರ್ ಸ್ಥಾನದ ಆಯ್ಕೆ ಬಾಕಿ ಇತ್ತು.
ಇದೀಗ ವಿಧಾನಸಭೆ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಶಾಸಕ ರುದ್ರಪ್ಪ ಲಮಾಣಿ ಅರ್ಜಿ ಸಲ್ಲಿಸಲಿದ್ದಾರೆ.