Friday, 13th December 2024

ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿ: ಉಮೇಶ್ ಹೇಳಿಕೆ

ಬೆಂಗಳೂರು: ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದಕ್ಕೆ ಅವರ ದತ್ತು ಪುತ್ರ ಉಮೇಶ್ ವಿಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿ ನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು.

‌ಸೆಪ್ಟೆಂಬರ್‌ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ರಾತ್ರಿ ಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ.