Saturday, 27th July 2024

ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಸಿಕ್ಕಿತು ವೇತನ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರದ ನಡುವೆಯೂ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಸಾರಿಗೆ ಇಲಾಖೆ ಮಾರ್ಚ್ ತಿಂಗಳ ವೇತನವನ್ನು ಪಾವತಿಸಿದೆ.

ಮುಷ್ಕರದ ನಡುವೆಯೂ ರಾಜ್ಯಾದ್ಯಂತ 4,256 ಕೆಎಸ್ ಆರ್ ಟಿಸಿ, 960 ಬಿಎಂಟಿಸಿ, 1837 ಎನ್ ಡಬ್ಲ್ಯುಕೆಆರ್ ಟಿಸಿ ಮತ್ತು 3377 ಎನ್ ಕೆಆರ್ ಟಿಸಿ ಸಿಬ್ಬಂದಿಗಳಿಗೆ ಮಾರ್ಚ್ ತಿಂಗಳ ಸಂಬಳವವನ್ನು ನೀಡಲಾಗಿದೆ. ಈ ಮೂಲಕ ರಾಜ್ಯದ ಒಟ್ಟು 10,430 ಸಾರಿಗೆ ಸಿಬ್ಬಂದಿಗೆ ಮಾರ್ಚ್ ತಿಂಗಳ ವೇತನ ಕೈಗೆ ಸಿಕ್ಕಂತಾಗಿದೆ.

ಮುಷ್ಕರ ನಿರತ ಸಾರಿಗೆ ನೌಕರರಿಗೆ ಮಾತ್ರ ಸಂಬಳ ಪಾವತಿಯಾಗಿಲ್ಲ. ಸಾರಿಗೆ ನೌಕರರ ಮುಷ್ಕರದ ನಡುವೆಯೂ  ಮಧ್ಯಾಹ್ನದ ವರೆಗೆ ಒಟ್ಟು 2,962 ಬಸ್ ಗಳ ಸಂಚಾರ ನಡೆದಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!