Saturday, 27th April 2024

ನಾಳೆಯಿಂದ 9-12ನೇ ತರಗತಿ ಶಾಲಾ-ಕಾಲೇಜುಗಳು ಆರಂಭ

ಬೆಂಗಳೂರು : ರಾಜ್ಯದಲ್ಲಿ ಆ.23ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜುಗಳು ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಬಿಎಂಟಿಸಿ ಬಸ್ ಗಳಲ್ಲಿ ತೆರಳೋದಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅನುಮತಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ರಾಜ್ಯ ಸರ್ಕಾರದ ನಿರ್ದೇಶನದಂತೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು 9 ರಿಂದ 12ನೇ ತರಗತಿಗಳು ಆ.23 ರಿಂದ ಪ್ರಾರಂಭಿಸಲಾಗುತ್ತಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಗುಣವಾಗುವಂತೆ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು ಕಳೆದ 2020-21ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸು ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ, ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿಯೊಂದಿಗೆ ಆ.23ರಿಂದ ಮುಂದಿನ ಆದೇಶದವರೆಗೂ ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ವಿದ್ಯಾರ್ಥಿಗಳ ವಾಸಸ್ಥಳದಿಂದ ಶಾಲಾ, ಕಾಲೇಜುಗಳವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!