ಕೆಎಸ್ ಇಎಬಿ ಅಧ್ಯಕ್ಷ ಡಾ.ರಾಮಚಂದ್ರನ್ ಸುದ್ದಿಗೋಷ್ಠಿಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಒಒಟ್ಟು 61 ಕೇಂದ್ರ ಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5,24, 209 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.
ಕಲಾವಿಭಾಗದಲ್ಲಿ 1,34, 876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 61.22 ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 75.89 ರಷ್ಟು ಫಲಿತಾಂಶ ಬಂದರೆ, ವಿಜ್ಞಾನ ವಿಬಾಗದಲ್ಲಿ 2,07,087 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದು, 85.71 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಬೆಂಗಳೂರಿನ ಜಯನಗರ ಕಾಲೇಜಿನ ತಬಸ್ಸುಮ್ 600 ಕ್ಕೆ 593 ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯ 600 ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600 ಕ್ಕೆ 596 ಅಂಕ ಪಡೆದು ಕೌಶಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.