Saturday, 27th July 2024

ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಇದೇ ತಿಂಗಳ 31 ರವರೆಗೆ ನಡೆಯಲಿದೆ.

ಮಾರ್ಚ್ 8 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಇಂದಿನಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಎರಡು ದಿನ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಚಾರವಾಗಿ ವಿಧಾನಸಭೆಯಲ್ಲಿ ವಿಶೇಷ ಚರ್ಚೆ ನಡೆಯ ಲಿದೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ನಂತರ ಚರ್ಚೆಗೆ ಅವಕಾಶ ನೀಡಲಾಗುವುದು.

ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಅಧಿವೇಶನ ನಡೆಯುವ ದಿನಗಳಂದು ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪ್ರತಿಭಟನೆ, ಮೆರವಣಿಗೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!