Sunday, 8th September 2024

ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ

ಬೆಂಗಳೂರು : ಮತದಾನದ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ಜಾಫರ್ ಅಲಿಗೆ ಜೆಡಿಎಸ್ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು. ಆದರೆ ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಜಾಫರ್ ಅಲಿ ಮತದಾರರ ಚೀಟಿ ಹೊಂದಿಲ್ಲದ ಕಾರಣ ಚುನಾವಣಾ ಅಧಿಕಾರಿಗಳು ಅವರ ನಾಮಪತ್ರ ತಿರಸ್ಕರಿಸಿದ್ದಾರೆ.

ಇನ್ನು ಅಬ್ಧುಲ್ ಜಾಫರ್ ನಂತರ ಮಂಜುನಾಥ್ ಎಂಬುವರು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ನಾಮಪತ್ರದ ಜೊತೆಗೆ ಮಂಜುನಾಥ್ ಜೆಡಿಎಸ್ ಪಕ್ಷದ ಬಿ ಫಾರಂ ಸಲ್ಲಿಸಿರಲಿಲ್ಲ.

ನಿಗದಿತ ಅವಧಿ ಮುಗಿದ ನಂತರ ಅವರು ನಾಮಪತ್ರ ಸಲ್ಲಿಸಿದ್ದರಿಂದ ಮಂಜುನಾಥ್ ಅವರ ನಾಮಪತ್ರವೂ ತಿರಸ್ಕರಿಸಲಾಗಿದೆ ಎನ್ನಲಾಗಿದೆ.

error: Content is protected !!