Saturday, 14th December 2024

ಹವಾಮಾನ ವೈಪರೀತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಬೆಂಗಳೂರು: ವಿಪರೀತ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.
ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ಮೂಲಗಳ ಪ್ರಕಾರ ಬೆಳಗ್ಗೆ 09.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸ ಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದರು. ಅದರಂತೆ ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕ ರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.