Thursday, 21st November 2024

ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ, 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ 8 ಮಂದಿ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿ ದ್ದಾರೆ.

ಕರ್ನಾಟಕದ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅದೇ ರೀತಿ 8 ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರು

  1. ಡಾ.ಜಿ.ಪರಮೇಶ್ವರ್
  2. ಕೆ.ಹೆಚ್. ಮುನಿಯಪ್ಪ
  3. ಕೆ.ಜೆ. ಜಾರ್ಜ್
  4. ಎಂ.ಬಿ.ಪಾಟೀಲ್
  5. ಸತೀಶ್ ಜಾರಕಿಹೊಳಿ
  6. ಪ್ರಿಯಾಂಕ್ ಖರ್ಗೆ
  7. ರಾಮಲಿಂಗ ರೆಡ್ಡಿ
  8. ಜಮೀರ್ ಅಹ್ಮದ್ ಖಾನ್