Thursday, 12th December 2024

ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ: ಸಿದ್ಧರಾಮಯ್ಯ

ಬೆಂಗಳೂರು: ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ ಎಂಬುದಾಗಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾತನಾಡಿ, ಐದು ಗ್ಯಾರಂಟಿಗಳನ್ನು ಸಚಿವ ಸಂಪುಟ ಸಭೆಯ ಬಳಿಕವೇ ಜಾರಿಗೊಳಿಸುತ್ತೀರೋ ಅಥವಾ ಹಂತ ಹಂತವಾಗಿ ಜಾರಿ ಮಾಡು ತ್ತೀರೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ನಾವು ಆ ಬಗ್ಗೆ ಎಲ್ಲವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.

ಸಭೆಯಲ್ಲಿ ಗ್ಯಾರಂಟಿ ಜಾರಿಯ ಬಗ್ಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳೊಂದಿಗೂ ಚರ್ಚಿಸಲಾಗಿದೆ. ಈ ಎಲ್ಲಾ ಮಾಹಿತಿ ಯನ್ನು ಆಧರಿಸಿ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಈ ಬಳಿಕ ಗ್ಯಾರಂಟಿಯ ಬಗ್ಗೆ ಮಾಹಿತಿ ನೀಡಲಾಗು ವುದು ಎಂದರು.

ಐದು ಗ್ಯಾರಂಟಿ ಯೋಜನೆಯಲ್ಲಿ ಈಗಾಗಲೇ ಉಚಿತ ಬಸ್ ಪಾಸ್ ಯೋಜನೆಯನ್ನು ಎಲ್ಲಾ ಮಹಿಳೆಯರಿಗೆ ನೀಡಲಾಗುತ್ತದೆ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದರು.