Monday, 16th September 2024

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ನಿಯಿಂದ ವಾಚ್ ಗಿಫ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅವರ ಪತ್ನಿ ಆಕರ್ಷಕ ಉಡುಗೊರೆಯಾಗಿ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಪುಣ್ಯತಿಥಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆ ವಾಚ್ ಕಟ್ಟಿ ಕೊಂಡು ಬಂದಿದ್ದಾರೆ.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ವಾಚ್ ಎಲ್ಲರ ಗಮನ ಸೆಳೆದಿತ್ತು ಸಿಎಂ ಸಿದ್ದರಾಮಯ್ಯ ಹೊಸ ವಾಚ್ ಕಟ್ಟಿಕೊಂಡು ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಾಚ್ ನ್ನೇ ನೋಡಿದ್ದಾರೆ. ಇನ್ನೂ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಎಂಬಿ ಪಾಟೀಲ್ ಸಿದ್ದರಾಮಯ್ಯ ವಾಚ್ ಮುಟ್ಟಿ ಮುಟ್ಟಿ ನೋಡಿದ್ದಾರೆ.