Thursday, 12th December 2024

ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ

ಬೆಂಗಳೂರು : ನಾನು ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ವಿಚಾರ ಚರ್ಚೆಗೆ ಗ್ರಾಸ ವಾಗುತ್ತಿದೆ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವಿರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ ಮಾಡಲು ಸಾಧ್ಯವಿಲ್ಲ ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ರಾಜಕೀಯ ನಿವೃತ್ತಿ ಕುರಿತು ಸುಳಿವು ನೀಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಗೆ ಹೆಸರಿಡುವ ವಿಚಾರಕ್ಕೆ ಕುರಿತಂತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ದೇಶ ಕಂಡ ಮಹಾನ್ ವ್ಯಕ್ತಿ. ಅಭಿವೃದ್ಧಿ ವಿಚಾರವಾಗಿ ಅನೇಕ ಕೆಲಸ ಮಾಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ದಶಪಥಕ್ಕೆ ಇಡಲು ನಿತಿನ್ ಗಡ್ಕರಿ ಹಾಗೂ ಸಿಎಂ‌ಗೆ ಮನವಿ ಮಾಡಿದ್ದೇನೆ ಅವರು ಏನು ಮಾಡುತ್ತಾರೆ ನೋಡಬೇಕು ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಸಂಘಟನೆ ಬಗ್ಗೆ ಪ್ರಯತ್ನಗಳು ನಡೆಯುತ್ತಿವೆ. ಯಾರಾದರೂ ಕೇಳಿದರೆ ಸಲಹೆ ಕೊಡುತ್ತೇನೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಪಡಿಸುವ ವಿಚಾರಕ್ಕೆ ಯಾರು ಸಕ್ರಿಯ ರಾಜಕಾರಣದಲ್ಲಿದ್ದಾರೋ ಅವರು ತೀರ್ಮಾನ ಮಾಡುತ್ತಾರೆ. ನಾನು ಸಕ್ರೀಯ ರಾಜಕಾರಣದಲ್ಲಿ ಇಲ್ಲ. ಹಾಗಾಗಿ ನಾನು ಅದರ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ ಎಂದರು.

Read E-Paper click here