Saturday, 14th December 2024

ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು: ಮೇ.8ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಘೋಷಣೆಯಾಗ ಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಈ ಕುರಿ ತಂತೆ ಮಾಹಿತಿ ನೀಡಿದ್ದಾರೆ. ಮಾರ್ಚ್ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಯನ್ನು ದಿನಾಂಕ 31-03-2023ರಿಂದ 15-04-2023ರವರೆಗೆ ನಡೆಸಲಾಯಿತು ಎಂದಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 8-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ.