Thursday, 7th December 2023

ಏಳು ಮಂದಿ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ ಅವರು ನೂತನ ಸದಸ್ಯರಿಗೆ ಹೂಗುಚ್ಛ ನೀಡಿ ಅಭಿನಂದಿಸಿ, ಬಳಿಕ ಪ್ರಮಾಣವಚನ ಬೋಧಿಸಿದರು.

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ ಹಾಗೂ ಎಸ್. ಕೇಶವ ಪ್ರಸಾದ್, ಕಾಂಗ್ರೆಸ್‌ನ ಎಂ. ನಾಗರಾಜು ಯಾದವ್, ಕೆ ಅಬ್ದುಲ್ ಜಬ್ಬಾರ್ ಹಾಗೂ ಜೆಡಿಎಸ್‌ನ ಟಿ.ಎ. ಸರವಣ ಅವಿರೋಧವಾಗಿ ಆಯ್ಕೆಯಾಗಿದ್ದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಇದ್ದರು.

error: Content is protected !!