Friday, 1st December 2023

ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ: ಟಿ.ಎ ನಾರಾಯಣಗೌಡ

ಬೆಂಗಳೂರು: ಬೆಂಗಳೂರು ಬಂದ್ ಹಾಗೂ ಸೆ.29ರಂದು ಕರೆ ನೀಡಿರುವಂತ ಕರ್ನಾಟಕ ಬಂದ್ ಸೇರಿದಂತೆ ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ ಸ್ಪಷ್ಟ ಪಡಿಸಿದ್ದಾರೆ.

ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ. ಕನ್ನಡ ಭಾಷೆ, ನೆಲ, ಜಲದ ವಿಚಾರವಾಗಿ ನನ್ನ ಹೋರಾಟ ಮುಂದುವರಿಯುತ್ತೆ ಎಂದು ಹೇಳಿದ್ದಾರೆ.

ಬಂದ್​​ನಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತೆ. ದಿನಗೂಲಿ ನೌಕಕರಿಗೆ ಈ ಬಂದ್​ನಿಂದ ತೊಂದರೆ ಆಗುತ್ತೆ. ಬಂದ್ ನಿಂದ ಕಾವೇರಿಯನ್ನ ಉಳಿಸಿ ಕೊಳ್ಳಲು ಆಗಲ್ಲ ಎಂಬುದಾಗಿ ತಿಳಿಸಿದ್ದಾರೆ.

ಬಂದ್ ಅಂದರೇ ಟೌನ್ ಹಾಲ್​ನಿಂದ ಮೆರವಣಿಗೆ ಬರುವುದು ಅಷ್ಟೇನಾ? ಮಾತಿಗೆ ಮುಂಚೆ ಬಂದ್ ಒಂದೇ ಬ್ರಹ್ಮಾಸ್ತ್ರ ಆಗಬಾರದು. ರಾಜಕಾರಣಿಗಳನ್ನು ನಂಬಿಕೊಂಡು ಹೋರಾಟಕ್ಕೆ ಹೋಗಬಾರದು ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!