Friday, 24th May 2024

ಪ್ರಮಾಣವಚನ ಸ್ವೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್

ಬೆಂಗಳೂರು: ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹಲೋತ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಓಕ್​ ಪ್ರತಿಜ್ಞಾವಿಧಿ ಬೋಧಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಥಾವರ್ ಚಂದ್ ಗೆಹಲೋತ್ ಪ್ರಮಾನವಚನ ಸ್ವೀಕರಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಜುಬಾಯಿ ವಾಲಾ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಮಧ್ಯಪ್ರದೇಶದ ನಾಗ್ಡಾದ ರುಪೆಟಾ ಗ್ರಾಮದಲ್ಲಿ ದಲಿತ ಕುಟುಂಬದಲ್ಲಿ ಜನಿಸಿದ ಗೆಹಲೋತ್, ಭಾರತೀಯ ಜನತಾ ಪಕ್ಷದ ಹಿರಿಯ ಸದಸ್ಯರು. ಮಧ್ಯಪ್ರದೇಶದ ಉಜ್ಜಯಿನ ವಿಕ್ರಮ್ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿ ಪಡೆದಿದ್ದಾರೆ. ಇವರು ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿ ದ್ದರು.

ಮೂರು ಬಾರಿ ಮಧ್ಯಪ್ರದೇಶದ ಶಾಸಕರಾಗಿ, ನಾಲ್ಕುಬಾರಿ ಲೋಕಸಭಾ ಸದಸ್ಯರಾಗಿದ್ದ ಥಾವರ್ ಚಂದ್ ಗೆಹಲೋತ್ ಅವರು ಹಾಲಿ ರಾಜ್ಯಸಭಾ ಸದಸ್ಯರಾಗಿದ್ದರು. ಇವರಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಯೂನಿರ್ವಸಿಟಿ ಆಫ್ ಸೋಷಿಯಲ್‌ ಸೈನ್ಸ್‌ನಿಂದ ಗೌರವ ಡಾಕ್ಟರೇಟ್‌ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!