Sunday, 15th December 2024

ಭೀಕರ ರಸ್ತೆ ಅಪಘಾತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ ಬಳಿ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ತಿರುಪತಿಗೆ ಹೋಗುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಚಿತ್ತೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.