ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಆದರೆ, ಶೀಘ್ರವೇ ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ. ‘ಅಣ್ಣಯ್ಯ’ ಹೆಸರಿನ ಹೊಸ ಧಾರಾವಾಹಿ ಇದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.
ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ವಿಶೇಷ ಎಂದರೆ ನಗರ ಭಾಗದ ಟಿಆರ್ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.
ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್ಪಿ ಪಡೆದು ಮುನ್ನುಗ್ಗುತ್ತಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.