ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅವರನ್ನು ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವು ದಾಗಿ ರಾಜೀನಾಮೆ ಪತ್ರದಲ್ಲಿ ಸುದರ್ಶನ್ ಬರೆದಿದ್ದಾರೆ.
ಎಐಸಿಸಿ ಅಧ್ಯಕ್ಷ ಪದವಿಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಹಿರಿಯ ಅನುಭವಿ ನಾಯಕ ಅವರಿಗೆ ಅಭಿನಂಧನೆಗಳು ಹಾಗೂ ಶುಭಾಶಯಗಳು. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ, ಕರ್ನಾಟಕ ವಿಧಾನಸಭಾ ವಿರೋಧ ಪಕ್ಷದ ನಾಯಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ , CWC ಸದಸ್ಯರಾಗಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಸಚಿವರಾಗಿ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಪರಿಣಾಮಕಾರಿ ಯಾಗಿ ಮತ್ತು ಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸಿ, ಅಪಾರ ಅನುಭವ ಹೊಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ದೇಶದ ಎಲ್ಲಾ ಕಾಂಗ್ರೆಸ್ ಸದಸ್ಯರು ಅವರ ಅಭ್ಯರ್ಥಿ ಆಯ್ಕೆ ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ.
ಎಐಸಿಸಿ ಕೇಂದ್ರ ಚುನಾವಣಾ ಮಂಡಳಿ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಹಿನ್ನೆಲೆಯಲ್ಲಿ ಉತ್ತಮ ನಿಯಮ ಗಳನ್ನು ಪಾಲನೆ ಮಾಡಲು ತಿಳಿಸಿರುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ನಾನು ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.