Sunday, 28th April 2024

ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನೌಪಚಾರಿಕ ಒಪ್ಪಿಗೆ

ಬೆಂಗಳೂರು : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ಅನುಮೋದನೆ ನೀಡಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿ ಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ.

ವಿಜಯನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರ ಕೊನೆಗೂ ಅಸ್ತು ಎಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿದ್ಯುಕ್ತವಾಗಿ ಘೋಷಣೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!