Friday, 22nd November 2024

ಶಾಲಾ ಮಕ್ಕಳಿಗೆ ‘ವಾಟರ್ ಬೆಲ್’ ಯೋಜನೆ ಮರು ಜಾರಿ

ಬೆಂಗಳೂರು : ಶಾಲಾ ಮಕ್ಕಳಿಗೆ ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ‘ವಾಟರ್ ಬೆಲ್’ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸ ಬೇಕೆಂಬುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಶಾಲಾ ಅವಧಿಯಲ್ಲಿ ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು. ಕುಡಿಯುವ ನೀರಿನ ಬೆಲ್ ಗೆ ವಿಶೇಷ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಲಾಗಿದೆ.

ಬೆಳಗ್ಗೆ 10;35 ಕ್ಕೆ ಹಾಗೂ ಮಧ್ಯಾಹ್ನ 12 ಗಂಟೆ, ಹಾಗೂ 2 ಗಂಟೆಗೆ ವಾಟಲ್ ಬೆಲ್ ಮಾಡಲು ಚಿಂತನೆ ನಡೆಸಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ನೀರು ಬಹಳ ಮುಖ್ಯವಾಗಿದ್ದು, ಆದ್ದರಿಂದ ಮಕ್ಕಳಿಗೆ ನೀರು ಕುಡಿಯಲು ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಮಕ್ಕಳೂ ಸಾಮಾನ್ಯವಾಗಿ ಶಾಲೆಗೆ ವಾಟರ್ ಬಾಟಲ್ ತೆಗೆದುಕೊಂಡು ಹೋಗುತ್ತಾರೆ. ಆದರೆ, ಸಮರ್ಪಕವಾಗಿ ನೀರು ಕುಡಿಯು ತ್ತಾರೆಯೇ..? ಈ ಪ್ರಶ್ನೆಗೆ ಬಹುತೇಕ ಪೋಷಕರಲ್ಲಿ ತೃಪ್ತಿಕರ ಪ್ರತಿಕ್ರಿಯೆ ಇಲ್ಲ. ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಕೇರಳ ಮಾದರಿ ಯಲ್ಲಿ ವಾಟರ್ ಬೆಲ್ ಯೋಜನೆ ಮರು ಜಾರಿಗೊಳಿಸುವ ಕುರಿತು ಚಿಂತನೆ ನಡೆಸಿದ್ದಾರೆ.