Friday, 19th April 2024

ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?: ಹರಿಹಾಯ್ದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಲು ಕೈಗೊಂಡಿರುವ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯಲು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಷ್ಟೇ ಬಾಲಿಶ ಕ್ರಮ. ದೆಹಲಿಯಲ್ಲೊಬ್ಬರು ಪಾಳೆಯಗಾರ, ಕರ್ನಾಟಕದಲ್ಲೊಬ್ಬರು ಮಾಂಡಲಿಕ, ಭಲೇ ಜೋಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ

ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಕೊರೊನಾ ನಿಯಂತ್ರ ಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ?

ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಮುಖ್ಯಮಂತ್ರಿಗಳು ಹೊಂದಿದ್ದರೆ, ಮೊದಲು ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ಲಭ್ಯವಿರುವಂತೆ ನೋಡಿಕೊಳ್ಳಬೇಕು.

ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯ ವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನ ಹರಿಸಿ.

ದೇಶದ ಪ್ರಧಾನಿಯ ಅಂಧಾ ದರ್ಬಾರ್‌ನಿಂದ ರಾಜ್ಯದ ಮುಖ್ಯಮಂತ್ರಿಗಳು ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಗಳೇ, ನೀವು ಸ್ವಲ್ಪ ಬುದ್ದಿ ಕಲಿಯಿರಿ, ಅವರಿಗೂ ಸ್ವಲ್ಪ‌ ಬುದ್ದಿ ಹೇಳಿ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!