Sunday, 15th December 2024

ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ

ಬೆಂಗಳೂರು: ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರದ ಸುಬ್ರಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.

ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ 37 ವರ್ಷದ ಪ್ರತಿಮಾ ಹತ್ಯೆ ಮಾಡಲಾಗಿದೆ. ಕೊಲೆಯಾಗಿರುವ ಪ್ರತಿಮಾ ಗಣಿ ಭೂ ವಿಜ್ಞಾನ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.

ಶನಿವಾರ ಸಂಜೆ ಪ್ರತಿಮಾ ಕೆಲಸ ಮುಗಿಸಿ ಅಪಾರ್ಟ್‌ಮೆಂಟ್‌ಗೆ ವಾಪಸ್ ಆಗಿದ್ದರು. ಚಾಲಕ ಮನೆಗೆ ಬಿಟ್ಟು ಹೋದ ಬಳಿಕ ಯಾವುದೇ ಫೋನ್ ಕರೆಗೂ ಸಹ ಪ್ರತಿಮ ಉತ್ತರ ನೀಡಿರಲಿಲ್ಲ. ಫೋನ್ ರಿಸೀವ್ ಮಾಡದ ಕಾರಣ ಪ್ರತಿಮ ಸಹೋದರ ಭಾನುವಾರ ಬೆಳಗ್ಗೆ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ್ದರು.

ಮನೆಯಿಂದಲೂ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ಬಾಗಿಲು ಮುರಿದು ನೋಡಿದಾಗ ಪ್ರತಿಮಾ ಹತ್ಯೆಯಾದ ವಿಚಾರ ಬೆಳಕಿಗೆ ಬಂದಿದೆ.