Friday, 13th December 2024

ಯೋಗಿ ಆದಿತ್ಯನಾಥ್ ಕರ್ನಾಟಕ ಪ್ರವಾಸ ರದ್ದು

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ.

ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯುಂಟಾಗಿರುವ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕರ್ನಾಟಕ ಪ್ರವಾಸ ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ನಾಳೆಯಿಂದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಅಗಮಿಸಲಿದ್ದರು. ಆದರೆ ಉತ್ತರ ಪ್ರದೇಶ ಪ್ರವಾಹ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸ ರದ್ದು ಮಾಡುತ್ತಿರುವುದಾಗಿ ಯೋಗಿ ಆದಿತ್ಯನಾಥ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.