ಪಾವಗಡ: ಮದ್ಯದ ನಶೆಯಲ್ಲಿ ಬೆಸ್ಕಾಂ ಜೂನಿಯರ್ ಎಂಜಿನಿಯರ್‌ಗಳು, ಸಿಬ್ಬಂದಿಗಳು ಬಾಟಲಿಯಿಂದ ಬಡಿದಾಡಿಕೊಂಡಿರುವ ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಹೊರವಲಯದಲ್ಲಿ ಇಬ್ಬರು ಅಧಿಕಾರಿಗಳು, ಸಿಬ್ಬಂದಿಗಳು ಕೈಯಲ್ಲಿ ಬಿಯರ್ ಬಾಟಲಿ ಹಿಡಿದು ಹೊಡೆದಾಡಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಟೀಕೆಗೆ ಗ್ರಾಸವಾಗಿದೆ.
ಪಟ್ಟಣದ ಹೊರವಲಯದಲ್ಲಿ ಆಯೋಜಿಸಿದ್ದ ಪಾರ್ಟಿ ಮಧ್ಯೆ ಮಾತಿಗೆ ಮಾತು ಬೆಳೆದು ಜೂನಿಯರ್ ಎಂಜಿನಿಯರ್‌ಗಳಾದ ಶ್ರೀನಿವಾಸ್, ವಾದಿರಾಜ್, ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ತಲೆ ಹೊಡೆದು ರಕ್ತ ಸುರಿಯುತ್ತಿದ್ದರೂ ಅಧಿಕಾರಿಗಳು ಪರಸ್ಪರ ಬಡಿದಾಡಿಕೊಂಡಿರುವುದು ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.