ತುಮಕೂರು: ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾಗಿರುವ ಬಿಜೆಪಿ ಮುಖಂಡ ಜಿ.ಎನ್.ಬೆಟ್ಟಸ್ವಾಮಿ ಅವರಿಗೆ ಎದೆ ನೋವು ಕಾಣಿಸಿಕೊಂಡಿರುವುದರಿಂದ ಬೆಟ್ಟಸ್ವಾಮಿ ಅವರು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ತಡರಾತ್ರಿ 2 ಗಂಟೆ ಸುಮಾರಿನಲ್ಲಿ ಹೃದಯ ಬೇನೆ ಕಾಣಿಸಿಕೊಂಡಿದ್ದರಿಂದ ಕುಟುಂಬದ ಸದಸ್ಯರು ಬೆಟ್ಟಸ್ವಾಮಿ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಪಕ್ಷ ತಮಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ಕುಗ್ಗಿ ಹೋದ ಬೆಟ್ಟಸ್ವಾಮಿ ಹೃದಯ ಬೇನೆ ಕಂಡುಬAದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ.
ಮ0ಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಬೆಟ್ಟಸ್ವಾಮಿ ಯಾರಿಗೇ ಟಿಕೆಟ್ ನೀಡಿದರೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವುದಾಗಿ ಹೇಳಿದ್ದರು.