Thursday, 12th December 2024

ಮೈಸೂರಿನಿಂದ ಮಂಡ್ಯದತ್ತ ಭಾರತ ಐಕ್ಯತಾ ಯಾತ್ರೆ

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಪಾದಯಾತ್ರೆ ಸೋಮವಾರ ಮೈಸೂರಿನಿಂದ ಮಂಡ್ಯದತ್ತ ಹೊರಟಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ‌ಕೂಡ ಭಾಗವಹಿಸಲಿದ್ದಾರೆ.

ದೆಹಲಿಯಿಂದ ಮೈಸೂರಿಗೆ ಮಧ್ಯಾಹ್ನ ಬಂದಿಳಿಯಲಿದ್ದಾರೆ. ಮಾಧ್ಯಮದವರ ಜೊತೆ ಮಾತುಕತೆ ನಡೆಸಲಿದ್ದು, ಬಳಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿ ದ್ದಾರೆ ಎನ್ನಲಾಗಿದೆ.

ಕಳೆದ ಭಾನುವಾರ ನಂಜನಗೂಡಿನಿಂದ ರಾಹುಲ್ ಗಾಂಧಿ ಪಾದಯಾತ್ರೆ ಮೂಲಕ ಹೊರಟಿದ್ದು, ರಾತ್ರಿ ಸಮಯಕ್ಕೆ ಮೈಸೂರು ತಲುಪಿದ್ದರು. ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದಿದ್ದರು.

ಸೋಮವಾರ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದೆ. ಮೈಸೂ ರಿನ ಆರ್ ಗೇಟ್‌ನಿಂದ ಪಾದಯಾತ್ರೆ ಆರಂಭವಾಯಿತು. ಮೊದಲು 12 ಕಿಲೋ ಮೀಟರ್‌ ಹೆಜ್ಜೆ ಪಾದಯಾತ್ರೆಯನ್ನು ರಾಹುಲ್ ಗಾಂಧಿ ಪೂರ್ಣಗೊಳಿಸಲಿದ್ದಾರೆ.

ಅಕ್ಟೋಬರ್‌ 4, 5ರಂದು ಆಯುಧ ಪೂಜೆ, ವಿಜಯದಶಮಿ ಪ್ರಯುಕ್ತ ಪಾದಯಾತ್ರೆಗೆ ಬಿಡುವು ನೀಡಲಾಗಿದೆ.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾ ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಮುಖಂಡರಾದ ಸತೀಶ್ ಜಾರಕಿಹೋಳಿ, ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಕೆ.ಜೆ. ಜಾರ್ಜ್, ರಾಮಲಿಂಗರೆಡ್ಡಿ, ಎಚ್.ಸಿ. ಮಹದೇವಪ್ಪ, ಮೋಟಮ್ಮ, ಮಹಮ್ಮದ್ ನಲಪಾಡ್ ಹ್ಯಾರೀಸ್, ಶಾಸಕರಾದ ಯು.ಟಿ. ಖಾದರ್, ಐವಾನ್ ಡಿಸೋಜಾ, ರಿಜ್ವಾನ್ ಹರ್ಷದ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಂಜುನಾಥ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಐಶ್ವರ್ಯ ಮಹದೇವ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮಣ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.