Sunday, 15th December 2024

ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣಗೆ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ. ಹಾಗೂ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಈ ಮೂಲಕ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

15 ದಿನಗಳಿಂದ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಬಂಧನಕ್ಕೆ ಎಸ್‌ಐಟಿ ತೀವ್ರ ಶೋಧ ನಡೆಸಿದ್ದು, ಸುಳಿವು ಸಿಗುತ್ತಿಲ್ಲ. ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.