ಶಿರಸಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಉತ್ತರ ಕನ್ನಡ ಕಾಂಗ್ರೇಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಅವರಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಕಾಂಗ್ರೆಸ್ ಮುಖಂಡ ರಾದ ಬಿ.ಕೆ.ಹರಿಪ್ರಸಾದ್, ಮಧು ಬಂಗಾರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಘೋಟ್ನೇಕರ್, ಮಾಜಿ ಶಾಸಕರಾದ ಮಂಕಾಳು ವೈದ್ಯ, ಸತೀಶ್ ಸೈಲ್, ಶಾರದಾ ಶೆಟ್ಟಿ ಸಾಥ್ ನೀಡಿದರು.
ಕಾರ್ಯಕರ್ತರ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.