ಬಾಗೇಪಲ್ಲಿ: ರಾಜ್ಯದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ತಾಲ್ಲೂಕು ಕರ್ನಾ ಟಕ ರಕ್ಷಣಾ ವೇದಿಕೆ ಹರೀಶ್ ಅವರ ನೇತೃತ್ವದಲ್ಲಿ ಇಂದು ಪಟ್ಟಣದ ಗೂಳೂರು ವೃತ್ತದಲ್ಲಿ ಬೈಕ್ ರ್ಯಾಲಿ ಮಾಡಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದ್ದು ಕೂಡಲೇ ಹಿಂದಿ ದಿವಸ್ ಆಚರಣೆಯನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಬೇಕು ಎಂದು ಆಗ್ರಹಿಸಿದರು.
ಭಾರತದಲ್ಲಿ ೨೨ ಆಡಾಳಿತಾತ್ಮಕ ಭಾಷೆಗಳಿವೆ, ಎಲ್ಲಾ ಭಾಷೆಗಳನ್ನು ತುಳಿತ್ತಕ್ಕೆ ಒಳಪಡಿಸಲು, ಕೇಂದ್ರ ಸರ್ಕಾರ ಹಿಂದಿ ಸಪ್ತಾಹ, ಹಿಂದಿ ದಿವಸ್ ಅನ್ನುವ ಕಾರ್ಯಕ್ರಮಗಳನ್ನು ಮಾಡುತ್ತಿದೆ ಅದರ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: Chickballapur News: ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು -ಬಿಇಒ ವೆಂಕಟೇಶಪ್ಪ
ದೇಶದ ಹಲವು ಉದ್ಯೋಗಗಳ ಪರಿಕ್ಷೆಯಲ್ಲಿ ಹಿಂದಿಯನ್ನು ಬಲವಂತವಾಗಿ ಹೇರಿದ್ದಾರೆ. ಈಗ ಹಿಂದಿ ದಿವಸ್ ಮೂಲಕ ನಮ್ಮ ಮೇಲೆ ಹೇರಿಕೆ ನಡೆಸುತ್ತಿದ್ದಾರೆ. ಬಲವಂತವಾಗಿ ಹೇರಿಕೆ ಮಾಡುವ ಮೂಲಕ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೀರಾ. ಹೀಗಾಗಿ ಇಂದು ಹಿಂದಿ ಕಾರ್ಯಕ್ರಮವನ್ನು ಧಿಕ್ಕರಿಸಿ ನಾವು ಕಪ್ಪು ದಿನವನ್ನಾಗಿ ಆಚರಣೆ ಮಾಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಬ್ಯಾಂಕುಗಳಲ್ಲಿ ಇಲ್ಲಿ ವ್ಯವಹಾರ ನಡೆಸುವಾಗ ಕನ್ನಡ ಭಾಷೆ ಬಳಕೆಗೆ ಮೊದಲ ಆದ್ಯತೆ ನೀಡಬೇಕು. ಆದರೆ, ಹಿಂದಿ ಭಾಷೆಯನ್ನು ಒತ್ತಾಯಪೂರ್ವಕವಾಗಿ ಕನ್ನಡಿಗರ ಮೇಲೆ ಹೇರಲಾಗುತ್ತಿದೆ. ಈ ಮೂಲಕ ಕನ್ನಡಿಗರ ಮೂಲ ಭೂತ ಹಕ್ಕುಗಳಿಗೆ ಧಕ್ಕೆ ತರಲಾಗುತ್ತಿದೆ. ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಿ, ಬ್ಯಾಂಕಿನ ಡಿಜಿಟಲ್ ನಾಮಫಲಕ ಗಳು, ಎಟಿಎಂ ಯಂತ್ರಗಳು, ಅರ್ಜಿ ಪ್ರತಿಗಳು ಎಲ್ಲೆಡೆ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಪ್ರಧಾನ ಕಾರ್ಯದರ್ಶಿ ರಿಯಾಜ್ ವುಲ್ಲಾ ನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಕೆ, ಮಹಿಳಾ ತಾಲೂಕು ಅಧ್ಯಕ್ಷರಾದ ಗಂಗರತ್ನಮ್ಮ, ಸಂಚಾಲಕರಾದ ಶಿವಕುಮಾರ್ ಕೆ.ಎನ್, ಕಾರ್ಯ ದರ್ಶಿಗಳಾದ ಶಂಕರ್ ಕಾರ್ಮಿಕ ಘಟಕದ ಕೃಷ್ಣಪ್ಪ, ಖಜಾಂಚಿ ನಾರಾಯಣಸ್ವಾಮಿ, ವಕ್ತಾರದ ಕೃಷ್ಣ ನಾಯಕ್ ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಗಂಗರಾಜ್ ಎಂ.ಸಿ.ರಾಜು, ಗಗನ್ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.