ತುಮಕೂರು: ಬಿಜೆಪಿ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ಓಬಿಸಿ ಮೋರ್ಚಾ ವತಿಯಂದ ಸದಸ್ಯತ್ವ ನೊಂದಣಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ತುಮ ಕೂರು ಜಿಲ್ಲೆಯಲ್ಲಿ ಬಿಜೆಪಿ ಓಬಿಸಿ ಘಟಕ ಪ್ರಬಲವಾಗಿದೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಸುಮಾರು ಒಂದು ಲಕ್ಷ ಸದಸ್ಯರನ್ನು ನೋಂಯಿಸುವ ಗುರಿ ಹೊಂದಿದ್ದು, ಓಬಿಸಿ ಘಟಕದ ಕಾರ್ಯಕರ್ತರು ಮತ್ತು ಮುಖಂಡರುಗಳು ತಮ್ಮ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷಕ್ಕೆ 100 ಸದಸ್ಯರನ್ನು ನೊಂದಾಯಿಸಿದ ಕನಿಷ್ಠ 3 ಜನ ಸಕ್ರಿಯ ಕಾರ್ಯಕರ್ತರನ್ನು ಹುಟ್ಟು ಹಾಕಬೇಕು. ಆ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಬಲವಾಗಿ ಕಟ್ಟಲು ಮುನ್ನುಡಿ ಬರೆಯುವಂತೆ ಓಬಿಸಿ ಘಟಕದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ವೇಳೆ ಓಬಿಸಿ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯೆ ಪ್ರೇಮ ನಾಗಯ್ಯ,ರಾಜ್ಯ ಕಾರ್ಯಕಾರಿಣಿ ಸದಸ್ಯ ಬನಶಂಕರಿ ಬಾಬು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ, ನಗರ ಓಬಿಸಿ ಘಟಕದ ಅಧ್ಯಕ್ಷ ಹನುಮಂತರಾಜು, ಗುಬ್ಬಿ ನಗರ ಮಂಡಲ ಅಧ್ಯಕ್ಷ ಜಯಣ್ಣ, ಪಾಲಿಕೆ ಮಾಜಿ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಪುಟ್ಟರಾಜು, ಜಿಲ್ಲಾ ಮಂಡಳ ಗಳ ಪದಾಧಿಕಾರಿಗಳು, ನಗರ ಮಂಡಳಗಳ ಮುಖಂಡರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.