Saturday, 14th December 2024

ನಾಳೆ ಬಿಜೆಪಿಗೆ ಸಂಸದೆ ಸುಮಲತಾ ಅಂಬರೀಷ್ ಅಧಿಕೃತ ಸೇರ್ಪಡೆ

ಬೆಂಗಳೂರು: ಮೈತ್ರಿ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ ಅಂಬರೀಷ್ ಅವರು ಶುಕ್ರವಾರ ಬೆಳಗ್ಗೆ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.

ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು, ಈ ಬಾರಿ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿಸಿದ್ದಾರೆ. ಅಲ್ಲದೇ

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸು ವುದಾಗಿ ಘೋಷಿಸಿದ್ದೆ ಎಂದಿದ್ದಾರೆ.

ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ ಎಂದು ತಿಳಿಸಿದ್ದಾರೆ.

ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಹೇಳಿದ್ದಾರೆ.