Saturday, 14th December 2024

ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್( 26) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿ ದ್ದಾರೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಮಾವತ್ತೂರು ಕೆರೆ ಬಳಿಗೆ ತೆರಳಿದ್ದರು.

ಪ್ರಸನ್ನ ಭಟ್ ಕೆರೆಯಲ್ಲಿ ಕಣ್ಮರೆಯಾಗುತ್ತಿದ್ದಂತೆ ಅವರಿಗಾಗಿ ಶೋಧಕಾರ್ಯ ನಡೆಸ ಲಾಗಿತ್ತು. ದುರಾದೃಷ್ಟವಶಾತ್‌ ಭಾನುವಾರ ರಾತ್ರಿ ವೇಳೆ ಪ್ರಸನ್ನ ಭಟ್ ಮೃತದೇಹ ಮಾವತ್ತೂರು ಕೆರೆಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ದಯಾನಂದ ಸಾಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಪ್ರಸನ್ನ ಭಟ್ ಹೊಸನಗರ ತಾಲೂಕಿನವರಾಗಿದ್ದು, ವಿದ್ಯಾರ್ಥಿಯಾಗಿರುವಾಗಲೇ ಪತ್ರಿಕೋ ದ್ಯಮದಲ್ಲಿ ಆಸಕ್ತಿ ಬೆಳೆಸಿಕೊಂಡಿ ದ್ದರು. ಬಳಿಕ ವಿಶ್ವವಾಣಿ ಪತ್ರಿಕೆಯ ಹೊಸನಗರ ವರದಿ ಗಾರರಾಗಿ ಕೆಲಸ ನಿರ್ವಹಿಸಿದ್ದರು. ಆ ಬಳಿಕ ಸಂವಾದ ಡಿಜಿಟಲ್ ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸನ್ನ ಭಟ್‌ ಅವರ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ ಸೂಚಿಸಿ ದ್ದಾರೆ.

“ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು” ತಮ್ಮ ಸಾಮಾಜಿಕ ಜಾಲತಾಣ ದಲ್ಲಿ ಬರೆದುಕೊಂಡಿದ್ದಾರೆ.

 
Read E-Paper click here