Sunday, 15th December 2024

ಸಿದ್ದರಾಮಯ್ಯ ಮನೆಗೆ ಮುತ್ತಿಗೆ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಶ

ಬೆಂಗಳೂರು: ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಘಟನೆ ನಡೆದಿದೆ.

ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ವಾಸಕ್ಕೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ನಡುವೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಅಂದ ಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಟಿ ಸಮುದಾಯದ ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದರು.

ಡೆತ್ ನೋಟ್ ನಲ್ಲಿ ಮೂವರು ಅಧಿಕಾರಿಗಳ ಹೆಸರು ಕೂಡ ಅವರು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತ್ತು ಮಾಡಿದ್ದು, ಘಟನೆ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ.