Sunday, 19th May 2024

ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್

ಬೆಂಗಳೂರು: ಸಿಎಂ ಮಾಡಲು ಕೇಂದ್ರದ ನಾಯಕರು 2500 ಕೋಟಿ ಕೊಡಿ ಎಂದು ಕೇಳಿರುವ ಶಾಸಕ ಯತ್ನಾಳ್ ಹೇಳಿಕೆಗೆ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ಅಮಿತ್ ಈ ಹಿಂದೆ ಚುನಾವಣೆಗಳು ನಮಗೆ ವ್ಯವಹಾರ ಇದ್ದಂತೆ ಎಂಬ ಹೇಳಿಕೆ ನೀಡಿದರೆ, ಇದಕ್ಕೆ ಪೂರಕವಾಗಿ ಯತ್ನಾಳ್ ಅವರಿಗೆ ಎರಡುವರೆ ಸಾವಿರ ಕೋಟಿ ಹಣ ಕೇಂದ್ರದ ನಾಯಕರು ಕೇಳಿರಬೇಕು. ಯತ್ನಾಳ್ ಜವಾ ಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ.

ಸಿಎಂ ಸ್ಥಾನಕ್ಕಾಗಿ ಎರಡುವರೆ ಸಾವಿರ ಕೋಟಿ ಕೇಳಿರುವುದು ಕರ್ನಾಟಕ ರಾಜ್ಯ ತಲೆ ತಗ್ಗಿಸುವಂತದ್ದು ಮಾತ್ರ ವಲ್ಲ, ಸಂವಿಧಾನ, ಪ್ರಜಾಪ್ರಭುತ್ವ ಗಾಳಿಗೆ ತೂರಿ ಬಿಜೆಪಿಯವರು ಹಣದ ಮೇಲೆ ರಾಜಕಾರಣ ಮಾಡುತ್ತಿರು ವುದು ಸ್ಪಷ್ಟವಾಗಿ ಕಾಣುತ್ತಿದೆ.

ಧರ್ಮದ ಮೇಲೆ, ಹಣದ ಮೇಲೆ ರಾಜಕೀಯ ನಡೆಸುವುದು ಬಿಜೆಪಿಯ ಚುನಾವಣ ಕಾರ್ಯತಂತ್ರವಾಗಿದೆ. ಹಣ ಕೇಳಿದ್ದು ಯಾರು ಎಂದು ಕೂಡಲೇ ಯತ್ನಾಳ್ ಅವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಅಮಿತ್ ಶಾ ಕೇಳಿದ್ದಾ? ಮೋಹನ್ ಭಾಗವತ್ ಕೇಳಿದ್ದಾ? ನಡ್ಡಾ ಕೇಳಿದ್ದಾ? ಇಲ್ಲ ಮೋದಿ ಅವರು ಕೇಳಿದ್ದಾ? ಎಂದು ಬಿಜೆಪಿ ಕೇಂದ್ರದ ನಾಯಕರ ಮೇಲೆ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಕೂಡಲೇ ರಾಜ್ಯಪಾಲರು ಯತ್ನಾಳ್ ಹೇಳಿಕೆ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮ ಹಣಗಳಿಂದಲೇ ಬಿಜೆಪಿ ಇಂದು ದೇಶದಲ್ಲಿ ಇಂದು ಬಿಜೆಪಿ ಶ್ರೀಮಂತ ಪಕ್ಷವಾಗಿದೆ. ಆರ್ ಎಸ್ ಎಸ್ ಶ್ರೀಮಂತ ಎನ್ ಜಿವೋ ಆಗಿರುವುದು ಅಕ್ರಮ ಹಣದಿಂದಲೇ ಆಗಿರುವುದಕ್ಕೆ ಯತ್ನಾಳ್ ಹೇಳಿಕೆ ಸಾಕ್ಷಿ ಎಂದು ಹೇಳಿದರು.

error: Content is protected !!