Friday, 13th December 2024

Bmtc Bus Driver dies: ಬಿಎಂಟಿಸಿ ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವು

Bmtc Bus Driver dies

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ಚಾಲಕ (Bmtc Bus Driver dies) ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ. ಹೃದಯಾಘಾತ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ವೇಳೆ ಚಾಲಕ ಮೃತಪಟ್ಟಿದ್ದಾರೆ.

ಬಿಎಂಟಿಸಿ ಡಿಪೋ ನಂಬರ್. 40ರ ಚಾಲಕ ಕಿರಣ್(39) ಮೃತರು. ನೆಲಮಂಗಲದಿಂದ ಯಶವಂತಪುರಕ್ಕೆ ಬಿಎಂಟಿಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ದಾರಿಯ ಮಧ್ಯೆ ಚಾಲಕ ಕಿರಣ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ಈ ಕಾರಣದಿಂದ ಬಸ್‌ ಅನ್ನು ರಸ್ತೆ ಬದಿ ನಿಲ್ಲಿಸಿ, ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎನ್ನುವಷ್ಟರಲ್ಲಿ ಚಾಲಕ ಸಾವನ್ನಪ್ಪಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಬಲಿ, ಮಕ್ಕಳು ಅನಾಥ

Hit and Run Case

ಗದಗ: ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಗದಗ (Gadag news) ಜಿಲ್ಲೆಯ ನರಗುಂದ ಬಳಿ ಭೀಕರ ಅಪಘಾತದಲ್ಲಿ (Road Accident) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಜೊತೆಯಲ್ಲಿದ್ದ ಇಬ್ಬರು ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಲಾರಿ ಹಾಗೂ ದಂಪತಿಗಳಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ (Bagalakote news) ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಸಾವನ್ನಪ್ಪಿದವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳ್ಳಂಬೆಳಿಗ್ಗೆ ಈ ರಸ್ತೆ ಅಪಘಾತ ನಡೆದಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ, ಬಾಗಲಕೋಟೆಗೆ ಹೊರಟಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿವೆ. ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident: ಕೋಲಾರದಲ್ಲಿ ಭೀಕರ ಅಪಘಾತ; ಡಿವೈಡರ್ ಮೇಲೆ ನಿಂತಿದ್ದಾಗ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ