Saturday, 14th December 2024

ಬೋರ್ಡ್ ಪರೀಕ್ಷೆಗೆ ತಡೆ: ಮಾ.18ರಂದು ವಿಚಾರಣೆ

ಬೆಂಗಳೂರು: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಚ್ 18ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರದಿಂದ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರದ ವತಿಯಿಂದ ಸಲ್ಲಿಸಲಾದ ಮೇಲ್ಮನವಿ ವಿಚಾರಣೆ ಮಾರ್ಚ್ 18 ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ.

ಶುಕ್ರವಾರ ಮೇಲ್ಮನವಿ ಕುರಿತಾಗಿ ಅನುದಾನ ರಹಿತ ಖಾಸಗಿ ಶಿಕ್ಷಣಗಳ ಸಂಸ್ಥೆಗಳ ಪರ ವಕೀಲರು ಮಂಡಿಸಿದ ವಾದ ಆಲಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ ಅವರ ನೇತೃತ್ವದ ವಿಭಾಗೀಯ ಪೀಠ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.