Wednesday, 8th May 2024

ಹರ್ಷ ಹತ್ಯೆ ಪ್ರಕರಣ: ಸುಳಿವು ಲಭ್ಯ, ಶೀಘ್ರ ಬಂಧನ- ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸುಳಿವುಗಳನ್ನು ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹರ್ಷ ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದೆ. ಪೊಲೀಸರ ತನಿಖೆ ವೇಳೆ ಸಾಕಷ್ಟು ಸುಳಿವುಗಳನ್ನು ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದಿದ್ದಾರೆ.

ಶಿವಮೊಗ್ಗದ ಘಟನೆ ಬೆನ್ನಲ್ಲೇ ಮುಂದೆ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆರೋಪಿಗಳು ಯಾರೇ ಆಗಿದ್ದರೂ, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳ ಲಾಗುತ್ತದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ, ಸಿದ್ದರಾಮಯ್ಯನವರ ಮಾತು ಯಾವಾಗಲೂ ತರ್ಕಬದ್ಧವಾಗಿ ಇರುವುದಿಲ್ಲ ಎಂದು   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

ಶಿವಮೊಗ್ಗ ನಗರದ ಎನ್.ಟಿ. ರಸ್ತೆಯ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಭಜರಂಗ ದಳ ಕಾರ್ಯಕರ್ತ ಹರ್ಷನ ಮೇಲೆ ಏಕಾಏಕಿ ದಾಳಿ ನಡೆಸಿದೆ.

error: Content is protected !!