Monday, 20th May 2024

2023ರ ತನಕ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿ: ಪ್ರಹ್ಲಾದ್ ಜೋಷಿ

Pralhad Joshi

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರೇ 2023ರ ತನಕ ಮುಖ್ಯಮಂತ್ರಿ ಯಾಗಿರುತ್ತಾರೆ ಎಂದು ಬುಧವಾರ ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಹಬ್ಬಿ ರುವ ಗಾಳಿ ಸುದ್ದಿಗಳಿಗೆ ತೆರೆ ಎಳೆದರು.

ಕಳೆದ ವಾರದಿಂದ ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಹಬ್ಬಿವೆ. ಜುಲೈ 26ರಂದು ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಜುಲೈ 28ರಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಮಾಡುವ ಪ್ರಸ್ತಾಪ ಹೈಕಮಾಂಡ್ ಮಟ್ಟದಲ್ಲಿ ಇಲ್ಲ ಎಂದು ದೆಹಲಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದರು.

ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಮತ್ತು ಪಂಚಮಸಾಲಿ ಸಮುದಾಯ ಭವನ ಸಮಾರಂಭವಿತ್ತು. ಸ್ವಕ್ಷೇತ್ರದಲ್ಲಿ ನಡೆದ ಸಮಾರಂಭ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.

ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವೇ ಇಲ್ಲ. ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ. ಅಧಿಕಾರ, ಸ್ಥಾನಮಾನ ಶಾಶ್ವತ ವಲ್ಲ. ಬಸವರಾಜ ಬೊಮ್ಮಾಯಿ ಎಂಬುದಷ್ಟೇ ಶಾಶ್ವತ. ಹಿಂದಿರುವ ಪದನಾಮವಲ್ಲ” ಎಂದು ಹೇಳಿದ್ದರು.

ನಿಮ್ಮ ಪ್ರೀತಿ, ವಿಶ್ವಾಸದ ಮುಂದೆ ಯಾವ ಅಧಿಕಾರವೂ ಮಹತ್ವದ್ದಲ್ಲ. ಮೊದಲಿನಂತೆ ಪದೇ ಪದೇ ಕ್ಷೇತ್ರಕ್ಕೆ ಬಂದು ನಿಮ್ಮನ್ನು ನೋಡಲು ಆಗುತ್ತಿಲ್ಲ” ಎಂದು ಬೊಮ್ಮಾಯಿ ಭಾಷಣದಲ್ಲಿ ತಿಳಿಸಿದ್ದರು.

error: Content is protected !!