Friday, 2nd June 2023

ತಮಿಳುನಾಡು, ಕೇರಳ ಚುನಾವಣೆ ಬಂದೋಬಸ್ತ್‌ಗೆ ರಾಜ್ಯ ಪೊಲೀಸ್‌: ಬೊಮ್ಮಾಯಿ

ಕಲಬುರಗಿ: ತಮಿಳುನಾಡು, ಕೇರಳ ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಗೆ ರಾಜ್ಯದ ಪೊಲೀಸ್ ಪಡೆಯನ್ನು ಬಂದೋಬಸ್ತ್ ಬಳಸಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಪೊಲೀಸ್ ಪಡೆ ಆ ರಾಜ್ಯ ಗಳಿಗೆ ತೆರಳುತ್ತಿದೆ ಎಂದರು.

 

ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲುವು ಸಾಧಿಸ ಲಿದ್ದಾರೆ. ಬೆಳಗಾವಿ ‌ಲೋಕಸಭಾ ಉಪಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸ ಲಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಂಗ್ರೆಸ್ ‌ಆಡಳಿತಕ್ಕಿಂತಲೂ ಅತ್ಯುತ್ತಮವಾಗಿದೆ. ಕಾಂಗ್ರೆಸ್ ಪಕ್ಷದವರು ಅನಗತ್ಯವಾಗಿ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆ, ಸುಲಿಗೆ, ಗಾಂಜಾ ಸಾಗಾಟ ಎಷ್ಟಿತ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಸುಮ್ಮನೇ ಹೇಳಿಕೆ ಕೊಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ನವರು ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದರು.

 

error: Content is protected !!