ತುಮಕೂರು: ನಗರದ ರಿಂಗ್ ರಸ್ತೆಯಲ್ಲಿರುವ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಧರ್ಮದರ್ಶಿ ಟಿ.ಆರ್.ವೆಂಕಟೇಶ್ ಸಂಪಾದಕತ್ವದ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ ಎಂಬ ಕೃತಿಯನ್ನು ಸ್ವಾಮಿಯ ಸನ್ನಿಧಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಬಾ.ಹ.ರಮಾ ಕುಮಾರಿ ಬಿಡುಗಡೆ ಮಾಡಿದರು.