Sunday, 8th September 2024

300 ಜನರಿಂದ ಮತದಾನ ಬಹಿಷ್ಕಾರ

ತುಮಕೂರು: ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದ ರಾಯಸಂದ್ರದ ಕೊಪ್ಪದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಸಿ ದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಮತಗಟ್ಟೆ 56ರಲ್ಲಿ ಗ್ರಾಮಸ್ಥರು ಮತದಾನ ನಿರಾಕರಿಸಿ ದ್ದಾರೆ.

ಕೊಪ್ಪ ಗ್ರಾಮದಲ್ಲಿ ಸುಮಾರು 500 ಕ್ಕೂ ಹೆಚ್ಚು ಮತಗಳಿವೆ. ಅದರಲ್ಲಿ 300 ಕ್ಕೂ ಹೆಚ್ಚು ಮತದಾರರು ಮತದಾನ ಮಾಡಲು ನಿರಾಕರಿಸಿದ್ದಾರೆ. ಗ್ರಾಮದಲ್ಲಿ ರಸ್ತೆ, ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿ ಘೋಷಣೆ ಕೂಗಿ ಮತದಾನ ಬಹಿಷ್ಕರಿಸಿದ್ದಾರೆ.

ತುಮಕೂರಿನ ಸಿದ್ದಾರ್ಥ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 133ರ ಬೂತ್ ನಂ 59ರಲ್ಲಿ ಡಾ. ಜಿ ಪರಮೇಶ್ವರ್​ ಹಾಗೂ ಪತ್ನಿ ಕನ್ನಿಕಾ ಪರಮೇಶ್ವರ್ ಸಮೇತ ಬಂದು ಮತ ಚಲಾವಣೆ ಮಾಡಿದ್ದಾರೆ.

ನಂತರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಕೊರಟಗೆರೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ನಾನು ಓದಿದ ಊರು, ಶಾಲೆಯಲ್ಲೇ ಮತದಾನ ಮಾಡುತ್ತೇನೆ. ನನಗೆ ಭಾವನಾ ತ್ಮಕ ಸಂಬಂಧ ಇದೆ. ಹಾಗಾಗಿ ನಾನು ಸ್ಪರ್ಧೆ ಮಾಡುವ ಕೊರಟಗೆರೆ ಕ್ಷೇತ್ರದಲ್ಲಿ ಮತ ವರ್ಗಾವಣೆ ಮಾಡಿಕೊಂಡಿಲ್ಲ ಎಂದರು.

ನಮ್ಮ ಮತ ಅಮೂಲ್ಯ ಆಗಿರುವಂತಹದ್ದು, ಅದಕ್ಕೆ ಕೋಟಿ ಕೊಟ್ಟರೂ ಬೆಲೆ ಕಟ್ಟಲು ಸಾಧ್ಯವೇ ಇಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಗಂಗಾ ಸ್ವಾಮೀಜಿ ತಿಳಿಸಿದ್ದಾರೆ. ಮತದಾನ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅಷ್ಟು ಬೆಲೆ ಬಾಳುವ ಮತವನ್ನ ಆಮಿಷಗಳಿಗೆ ಒಳಗಾಗದೇ ಮತ ಚಲಾವಣೆ ಮಾಡಬೇಕು ಎಂದು ಹೇಳಿದರು. ಇದು ಪ್ರಜಾಪ್ರಭುತ್ವದ ಹಕ್ಕು, ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ಶ್ರೀಗಳು ಕರೆ ನೀಡಿದ್ದರು.

error: Content is protected !!