Saturday, 14th December 2024

ಎರಡನೇ ಹಂತದ ಮತದಾನ: ವಿಠಲಾಪುರ ನಿವಾಸಿಗಳಿಂದ ಮತದಾನ ಬಹಿಷ್ಕಾರ

ಕೊಪ್ಪಳ: ಇನ್ನು ಕುಷ್ಟಗಿ ತಾ| ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ.

ವಾರದ ಹಿಂದೆ ಇದೇ ಬಡಾವಣೆಯ ನಿವಾಸಿ ಲಕ್ಷ್ಮಿ ಎಂಬುವರು ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಾರೆ. ಮಗು ಕೂಡ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯ ದಿಂದ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮತ್ತು ಬಡಾವಣೆಯ ಜನ ಆರೋಪಿಸಿದ್ದರು.

ಈ ಹಿನ್ನೆಲಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕರಿಸಿದ್ದಾರೆ.

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಮಂಗಳವಾರ ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.