Friday, 1st December 2023

ಪ್ರಕೃತಿ ವಿಕೋಪ ಪರಿಹಾರ ನಿಧಿ ಶಿಫಾರಸ್ಸಿಗೆ ಲಂಚ ಸ್ವೀಕಾರ ಆರೋಪ: ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ :  ಕಳೆದ ಆಗಷ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆ ಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರಕ್ಕೆ ಶಿಫಾರಸ್ಸು ಮಾಡಲು 20 ಸಾವಿರ ರೂ. ಲಂಚ ಸ್ವೀಕರಿಸು ತ್ತಿದ್ದ ವೇಳೆ ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿ ದ್ದಾರೆ.
ಮಿಶ್ರಿಕೋಟಿ ಗ್ರಾಮದ ಅಶೋಕ ಗಂಗಪ್ಪ ಕಾಶಿಬಡಿಗೇರ ಎಂಬುವವರ ಮನೆಯು ಕಳೆದ ಆಗಸ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿ ಗೀಡಾಗಿತ್ತು. ಸರಕಾರ ನೀಡುವ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಅರ್ಜಿ ಸಲ್ಲಿಸಿದ್ದರು.ಪರಿಹಾರಕ್ಕೆ ಶಿಫಾರಸು ಮಾಡಲು ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಅವರು 30,000 ರೂ. ಗಳ ಲಂಚದ ಬೇಡಿಕೆ ಇಟ್ಟಿದ್ದರು.
ಕೊನೆಗೆ 20,000ರೂ. ಲಂಚಕ್ಕೆ ಒಪ್ಪಿಕೊಂಡಿದ್ದರು ಎಂದು ಫಿರ್ಯಾದಿದಾರರು ಇಂದು ಧಾರವಾಡ ಎ.ಸಿ.ಬಿ. ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಎ.ಸಿ.ಬಿ. ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಆರೋಪಿ ರಾಘವೇಂದ್ರ ಬೊಮ್ಮನಾಳ ರವರು ಫಿರ್ಯಾದಿಯ ಕಡೆಯಿಂದ 20,000 ರೂ.  ಲಂಚದ ಹಣ ಪಡೆದುಕೊಳ್ಳುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಬೆಳಗಾವಿಯ ಎಸಿಬಿ ಉತ್ತರ ವಲಯ ಪೊಲೀಸ್‍ಅಧೀಕ್ಷಕ  ಬಿ ಎಸ್ ನೇಮಗೌಡ, ಮಾರ್ಗದರ್ಶನದಲ್ಲಿ, ಧಾರವಾಡದ ಎಸಿಬಿ ಪೊಲೀಸ ಉಪಾಧೀಕ್ಷಕರಾದ ಎಲ್ ವೇಣುಗೋಪಾಲ ನೇತೃತ್ವದಲ್ಲಿ ಪೊಲೀಸ್ ಇನ್ಸಪೆಕ್ಟರ್ ಬಿ.ಎ ಜಾಧವ,ಮಂಜುನಾಥ ಹಿರೇಮಠ, ಸಿಬ್ಬಂದಿಯವರಾದ ಗಿರೀಶ್ ಮನಸೂರ, ಲೊಕೇಶ ಬೆಂಡಿಕಾಯಿ, ಜೆ.ಜಿ.ಕಟ್ಟಿ, ಶಿವಾನಂದ ಕೆಲವಡಿ, ಕಾರ್ತಿಕ ಹುಯಿಲಗೋಳ, ಗಣೇಶ ಶಿರಹಟ್ಟಿ, ವಿರೇಶ, ರವೀಂದ್ರ ಯರಗಟ್ಟಿ, ಶಂಕರ ನರಗುಂದ ಮತ್ತಿತರರು ತಂಡದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!