Thursday, 12th December 2024

ಅಮಿತ್ ಶಾ ರಾಜ್ಯ ಪ್ರವಾಸ: ಯಡಿಯೂರಪ್ಪ ಗೈರು

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಮಿತ್ ಶಾ ಕಾರ್ಯ ಕ್ರಮದಿಂದ ದೂರ ಉಳಿದಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಬೇಟೆಗಾಗಿ ರಾಜ್ಯ ಬಿಜೆಪಿ ಆಯೋಜಿಸಿರುವ ಅಮಿತ್ ಶಾ ಅವರ ಬೃಹತ್ ಸಮಾ ವೇಶ ಕಾರ್ಯಕ್ರಮಕ್ಕೆ ಹಿರಿಯ ನಾಯಕ, ಮಾಜಿ ಸಿಎಂ ಯಡಿಯೂರಪ್ಪ ಗೈರಾಗುತ್ತಿದ್ದಾರೆ. ಇಂದು ಮಂಡ್ಯ ಹಾಗೂ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ಯಡಿಯೂರಪ್ಪ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಅನುಪಸ್ಥಿತಿಗೆ ಕಾರಣವೇನು ಎಂಬುದನ್ನು ಮಾಜಿ ಸಿಎಂ ಯಡಿಯೂರಪ್ಪ ಅಮಿತ್ ಶಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ ಎನ್ನಲಾಗಿದೆ.

ಜನವರಿ 1ರವರೆಗೆ ವಿವಿಧ ಜಿಲ್ಲೆಗಳಲ್ಲಿ ಬಿ ಎಸ್ ವೈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬದಲು ಬೆಂಗಳೂರು ಹಾಗೂ ಮಂಡ್ಯ ಕಾರ್ಯಕ್ರಮದಲ್ಲಿ ಬಿ.ವೈ.ವಿಜಯೇಂದ್ರ ಅಮಿತ್ ಶಾ ಅವರ ಜೊತೆ ಇರಲಿದ್ದಾರೆ ಎನ್ನಲಾಗಿದೆ.
Read E-Paper click here