Thursday, 12th December 2024

ಬುಕ್ಕಾಪಟ್ಟಣ ಗ್ರಾಪಂಗೆ ಸಿಇಒ ದಿಢೀರ್‌ ಭೇಟಿ

ತುಮಕೂರು: ಕೊರಟಗೆರೆ ತಾಲ್ಲೂಕು ಬುಕ್ಕಾಪಟ್ಟಣ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಭು ಜಿ‌, ಬುಕ್ಕಾ ಪಟ್ಟಣ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಂಡಿದ್ದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಕೂಸಿನ ಮನೆಗೆ ಭೇಟಿ ನೀಡಿ ಆರೈಕೆದಾರರ ಜೊತೆ ಮಾತನಾಡಿದರು.
ನರೇಗಾ ಕಾಮಗಾರಿಗಳ ವೀಕ್ಷಣೆ 
ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ಷೇತ್ರ ಭೇಟಿ ನಡೆಸಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಇಒ, ರೈತರಿಗೆ ಅನುಕೂಲವಾಗುವಂತಹ, ಬರ ನಿರ್ವಹಣೆ ಮಾಡುವಂತಹ ಕಾಮಗಾರಿಗಳಿಗೆ ಹೆಚ್ಚಿನ ಆಧ್ಯತೆ ನೀಡಿ ಎಂದರು.
ರೈತರ ಜತೆ ಮಾತುಕತೆ : ಬುಕ್ಕಾಪಟ್ಟಣ ಗ್ರಾಮ ಪಂಚಾಯತಿ ಬರಕ ಗ್ರಾಮದ ರೈತ ಶಿವಕುಮಾರ್‌ ಜೊತೆ ಸಿಇಸಿ ಮಾತುಕತೆ ನಡೆಸಿದರು. ಶಿವಕುಮಾರ್‌ ನರೇಗಾ ಯೋಜನೆಯಡಿ ಬಾಳೆ ಬೆಳೆದಿದ್ದು, ಕ್ಷೇತ್ರ ಭೇಟಿ ವೇಳೆ ಬಾಳೆ ತೋಟವನ್ನು ವೀಕ್ಷಿಸಿದರು.
ಸಿಇಒ ಕೇತ್ರ ಭೇಟಿ ವೇಳೆ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ಉಪಸ್ಥಿತರಿದ್ದರು.