Thursday, 12th December 2024

ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಲ್ಲದೇ ಐವರು ತೀವ್ರವಾಗಿ ಗಾಯ ಗೊಂಡಿದ್ದಾರೆ.

ಇನ್ನೂ ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.