Wednesday, 11th December 2024

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ ಘೋಷಣೆ

ಶಿವಮೊಗ್ಗ: ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡ ಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ.

ಅಂಜನಾಪುರ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಬಳಿಕ ಮಾತನಾಡಿದ ಬಿಎಸ್​ವೈ, ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಮಾಡಲಿ ದ್ದಾರೆ. ಕ್ಷೇತ್ರದ ಜನತೆ ನನಗಿಂತ ಹೆಚ್ಚಿನ ಅಂತರದಲ್ಲಿ ವಿಜಯೇಂದ್ರರಿಗೆ ಗೆಲುವು ತಂದು ಕೊಡಬೇಕು ಎಂದು ಮನವಿ ಮಾಡಿದರು.

ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ತಮ್ಮ ತಂದೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರು ಯಾವ ರೀತಿ ಮಾರ್ಗದರ್ಶನ ಮಾಡುತ್ತಾರೆ. ಪಕ್ಷ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಅದರಂತೆ ನಡೆಯುತ್ತೇನೆ ಎಂದು ಹೇಳಿದ್ದಾರೆ.

ಶಿಕಾರಿಪುರ ಸ್ಪರ್ಧೆ ಬಗ್ಗೆ ತಂದೆಯವರನ್ನು ಕೇಳುವ ಪ್ರಶ್ನೆಯೇ ಉದ್ಭವಿಸಿರಲಿಲ್ಲ. ಕ್ಷೇತ್ರ ಜನರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯ ಮಾಡಿದ್ದರು. ಆದ್ದರಿಂದ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.