Wednesday, 11th December 2024

ಕಲಬುರಗಿಯಿಂದಲೇ ಪ್ರಧಾನಿ ಲೋಕಸಭೆ ಚುನಾವಣೆ ಪ್ರಚಾರ ಆರಂಭ

ಲಬುರಗಿ/ ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ.

ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್‌ ಮೂಲಕ ನಗರದ ಪೊಲೀಸ್‌ ಮೈದಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಮಿನಿ ರೋಡ್‌ ಶೋ ನಡೆಸುತ್ತ ಸಮಾವೇಶ ನಡೆಯುವ ನೂತನ ವಿದ್ಯಾಲಯದ ಮೈದಾನಕ್ಕೆ ತೆರಳಲಿದ್ದಾರೆ.

ಈ ಬಾರಿ ಪ್ರಧಾನಿ ಮೋದಿ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 10ಕ್ಕೂ ಹೆಚ್ಚು ಸಭೆ- ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. 2019ರಲ್ಲೂ ಪ್ರಧಾನಿ ಮೋದಿ ಇದೇ ಮೈದಾನ ದಲ್ಲಿ ರಣಕಹಳೆ ಮೊಳಗಿಸಿದ್ದರು. ಇದೇ ಸಮಾವೇಶದಲ್ಲಿ ಆಗ ಕಾಂಗ್ರೆಸ್‌ ಶಾಸಕರಾಗಿದ್ದ ಡಾ| ಉಮೇಶ ಜಾಧವ್‌ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.